ಚಿತ್ರದುರ್ಗ : ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ವಕ್ಫ್ ಬೋರ್ಡ್ ಆಸ್ತಿಗಳಿವೆ. ಈ ಜಾಗಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ವಸತಿ, ಆಸ್ಪತ್ರೆ ಹಾಗೂ ಕಾಲೇಜುಗಳ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಚೋಳಗುಡ್ಡದ ಅಗಸನಕಲ್ಲು ರಸ್ತೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಂಜುಮಾನ್ ಎ ದಾರೂಲ್ ಹುದಾ ಸಂಸ್ಥೆ ಕೊಹೇನೂರ್ ಶಾದಿಮಹಲ್ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ವಕ್ಫ್ ಬೋರ್ಡ್ ಆಸ್ತಿಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿದರೆ, ಸರ್ಕಾರದ ಅನುದಾನಕ್ಕೆ ಕಾಯುವ ಅವಶ್ಯಕತೆ ಬರುವುದಿಲ್ಲ. ಅಲ್ಪಸಂಖ್ಯಾತರ ಅಭಿವೃದ್ಧಿ ಬಯಸಿ ಜನರು ನನ್ನನ್ನು ಹರಿಸಿದ್ದಾರೆ. ಇದರಿಂದಾಗಿ ಸರ್ಕಾರದಲ್ಲಿ ಸಚಿವ ಸ್ಥಾನ ಲಭಿಸಿದೆ. ಜನರ ಅಭಿವೃದ್ಧಿಗೆ ಸದಾ ಶ್ರಮಿಸುತ್ತೇನೆ ಎಂದರು.
ಅಲ್ಪಸಂಖ್ಯಾತ ಸಮುದಾಯದ ಜನರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ. ನಮ್ಮ ಹಣೆ ಬರಹ ಇμÉ್ಟೀ ಎಂದು ಕೈ ಕಟ್ಟಿ ಕೂರಬಾರದು. ಡ್ರೈವರ್, ಮೆಕಾನಿಕ್, ಹಮಾಲಿ, ಕೂಲಿ ಕೆಲಸ ಮಾಡುವರರ ಮಕ್ಕಳು ಅದೇ ವೃತ್ತಿ ಮಾಡಬೇಕು ಎಂದೇನೂ ಇಲ್ಲ. ಕಷ್ಟಪಟ್ಟು ದುಡಿದರೆ ಪ್ರತಿಫಲ ದೊರಕುವುದು ಎಂದು ಸಚಿವ ಜಮೀರ್ ಅಹಮದ್ ಹೇಳಿದರು.
ಚಿತ್ರದುರ್ಗ ನಗರದ ಜನತೆಯ ಬಹುದಿನಗಳ ಕನಸು ಇಂದು ನನಸಾಗುತ್ತಿದೆ. ನಾಲ್ಕು ತಿಂಗಳಿಂದ ಶಾಸಕರಾದ ವೀರೇಂದ್ರ ಪಪ್ಪಿಯವರು ಇಲ್ಲಿನ ಶಾದಿ ಮಹಲ್ ನಿರ್ಮಾಣದ ಬಗ್ಗೆ ಹತ್ತಾರು ಬಾರಿ ಮನವಿ ಮಾಡಿದ್ದರು. ಅವರ ಕಳಕಳಿಯಂತೆ ಕೊಹೇನೂರ್ ಶಾದಿಮಹಲ್ ನೂತನ ಕಟ್ಟಡದ ನಿರ್ಮಾಣಕ್ಕೆ ರೂ. 2 ಕೋಟಿ ಮಂಜೂರು ಮಾಡಿದ್ದೇನೆ. ಜಿಲ್ಲೆಯ ನಿರ್ಮಾಣ ಹಂತದಲ್ಲಿ ಇದ್ದ ಶಾದಿ ಮಹಲ್ ಕಟ್ಟಡಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ವಕ್ಫ್ ಬೋರ್ಡ್ ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸಬೇಕು. ಚಿತ್ರದುರ್ಗ ನಗರದ ಅನ್ವರ್ ಭಾμÁ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ ಸಹಕಾರದಲ್ಲಿ ಮುಂದಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ 5 ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ದಂತ ವೈದ್ಯಕೀಯ ಓದುವ ವಿದ್ಯಾರ್ಥಿಗಳಿಗೆ ರೂ.1 ಲಕ್ಷ, ಇಂಜಿನಿಯರಿಂಗ್ ಓದುವ ವಿದ್ಯಾರ್ಥಿಗಳಿಗೆ ರೂ.50 ಸಾವಿರ, ವಿದೇಶದಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ರೂ.30 ಲಕ್ಷ ಹಣವನ್ನು ಸಬ್ಸಿಡಿ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ ಎಂದರು.