
ಬೆಳಗಾವಿ: ಭಾರೀ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆ ಚುಂಚವಾಡ ಗ್ರಾಮದಲ್ಲಿ ನಡೆದಿದೆ.
15 ವರ್ಷದ ಅನಂತ್ ಧರ್ಮೇಂದ್ರ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚುಂಚವಾಡ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಜಾನುವಾರುಗಳಿಗೆ ಮೇವು ಹಾಕಲು ತೆರಳಿದ್ದ ವೇಳೆಯಲ್ಲಿ ತೇವಗೊಂಡಿದ್ದ ಗೋಡೆ ಕುಸಿದು ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ನಂದಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.