ರಾಮನಗರ: ಮಳೆಯಿಂದಾಗಿ ಗೋಡೆ ಕುಸಿದು ಮಕ್ಕಳಿಬ್ಬರು ಸಾವನ್ನಪ್ಪಿದ್ದಾರೆ. ಸೋಲೂರಿನಲ್ಲಿ ದನದ ಕೊಟ್ಟಿಗೆ ಕುಸಿದು ದುರ್ಘಟನೆ ಸಂಭವಿಸಿದೆ.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ನೇಪಾಳ ಮೂಲದ ಫರ್ಬಿನ್(4), ಇಷಿಕಾ(3) ಮೃತಪಟ್ಟವರು. ಕೊಟ್ಟಿಗೆ ಪಕ್ಕದ ಶೆಡ್ ನಲ್ಲಿ ಮಲಗಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಮೀನಾ, ಮೋನಿಷಾ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎರಡು ಕುಟುಂಬದವರು ಒಂದೇ ಶೆಡ್ ನಲ್ಲಿ ವಾಸವಾಗಿದ್ದರು. ಗಂಗರಂಗಮ್ಮ ಎಂಬುವರಿಗೆ ಸೇರಿದ ದನದ ಕೊಟ್ಟಿಗೆ ಗೋಡೆ ಭಾರಿ ಮಳೆಯಿಂದ ಕುಸಿದು ಬಿದ್ದಿದೆ. ಕುದೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.