alex Certify ಮತ್ತೊಂದು ಮಹಾದುರಂತ: ಗೋಡೆ ಕುಸಿದು ಮಲಗಿದಲ್ಲೇ ನಾಲ್ವರು ಕಾರ್ಮಿಕರ ಕೊನೆಯುಸಿರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಮಹಾದುರಂತ: ಗೋಡೆ ಕುಸಿದು ಮಲಗಿದಲ್ಲೇ ನಾಲ್ವರು ಕಾರ್ಮಿಕರ ಕೊನೆಯುಸಿರು

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲ ಶೆಟ್ಟಿಹಳ್ಳಿ ಸಮೀಪ ನಡೆದಿದೆ.

ಉತ್ತರ ಭಾರತ ಮೂಲದ ಕಾರ್ಮಿಕರು ಶೆಡ್ ನಲ್ಲಿ ತಂಗಿದ್ದರು. ಧಾರಾಕಾರ ಮಳೆಯಿಂದಾಗಿ ಅಪಾರ್ಟ್ಮೆಂಟ್ ಗೋಡೆ ಕುಸಿದು ಶೆಡ್ ಮೇಲೆ ಬಿದ್ದಿದೆ. ಅವಶೇಷಗಳಡಿ ಸಿಲುಕಿ ಕಾರ್ಮಿಕರು ಮೃತಪಟ್ಟಿದ್ದಾರೆ. ದುರಂತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಿನ ಜಾವ ಮೂರೂವರೆ ಸುಮಾರಿಗೆ ಕಾರ್ಮಿಕರ ಶೆಡ್ ಮೇಲೆ ಗೋಡೆ ಕುಸಿದು ದುರಂತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...