ಬೆಳಗಾವಿ: ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ತಾಯಿ, ಮಗ ಸಾವು ಕಂಡ ಘಟನೆ ಮಾಡಗೇರಿ ಗ್ರಾಮದಲ್ಲಿ ನಡೆದಿದೆ.
ಯಲ್ಲವ್ವ(40), ಪುತ್ರ ಪ್ರಜ್ವಲ್(5) ಸಾವು ಕಂಡವರು ಎಂದು ಹೇಳಲಾಗಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಮಾಡಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ.
ಎರಡು ದಿನದಿಂದ ನಿರಂತರ ಮಳೆಯಿಂದ ತೇವಗೊಂಡಿದ್ದ ಮನೆಯ ಗೋಡೆ ಕುಸಿದು ದುರಂತ ಸಂಭವಿಸಿದೆ. ಘಟನೆಯಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.