alex Certify BIG NEWS: ವಕ್ಫ್ ನೋಂದಣಿ ವಿರುದ್ಧ ಸಮರಕ್ಕೆ ಸಜ್ಜಾದ ಬಿಜೆಪಿ: ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲು ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಕ್ಫ್ ನೋಂದಣಿ ವಿರುದ್ಧ ಸಮರಕ್ಕೆ ಸಜ್ಜಾದ ಬಿಜೆಪಿ: ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲು ನಿರ್ಧಾರ

ಬೆಂಗಳೂರು: ವಕ್ಫ್ ಮಂಡಳಿಯಿಂದ ರೈತರಿಗೆ ನೀಡಲಾಗಿರುವ ನೋಟಿಸ್ ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರೂ ಕೂಡ ವಕ್ಫ್ ವಿವಾದ ವಿಚಾರವಾಗಿ ರಾಜ್ಯ ಬಿಜೆಪಿ ಕಾನೂನು ಹೋರಾಟಕ್ಕೆ ಸಜ್ಜಾಗಿದೆ.

ವಕ್ಫ್ ನೋಂದಣಿ ವಿರುದ್ಧ ಬಿಜೆಪಿ ಸಂಸದ, ವಕ್ಫ್ ಕಾಯ್ದೆ ತಿದ್ದುಪಡಿ ಕುರಿತ ಜೆಪಿಸಿ ಸದಸ್ಯ ತೇಜಸ್ವಿ ಸೂರ್ಯ, ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಕೇವಲ ನೋಟಿಸ್ ಹಿಂಪಡದರೆ ಸಾಲದು ಪಹಣಿಯಲ್ಲಿನ ನೋಂದಣಿಯೂ ತಿದ್ದುಪಡಿ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಸೋಮವಾರ ತೇಜಸ್ವಿ ಸೂರ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಿದ್ದಾರೆ. ರೈತರ ಪಹಣಿಯಲ್ಲಿ ವಕ್ಫ್ ಎಂದು ನೋಂದಣಿ ಮಾಡಿರುವುದು, ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ತೇಜಸ್ವಿ ಸೂರ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...