ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರಿಗೆ ವಕ್ಪ್ ಬೋರ್ಡ್ ನೀಡಿರುವ ನೋಟಿಸ್ ವಾಪಸ್ ಪಡೆಯಲು ಸೂಚಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ರೈತರಿಗೆ ವಕ್ಫ್ ಬೋರ್ಡ್ ನಿಂದ ನೋಟಿಸ್ ನೀಡಿದ ವಿಚಾರ ರೈತರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನಿಂದಲೂ ಟೀಕೆಗೆ ಗುರಿಯಾಗುವ ಜೊತೆಗೆ ಭಾರಿ ಮುಜುಗರಕ್ಕೆ ಒಳಗಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡಿದ ನೋಟಿಸ್ ವಾಪಸ್ ಪಡೆಯಲು ಸೂಚಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಹೆಚ್.ಕೆ. ಪಾಟೀಲ್, ವಿಜಯಪುರ ಜಿಲ್ಲೆ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನೋಟಿಸ್ ಹಿಂಪಡಿಯಲಾಗುವುದು. ಆದ ತಪ್ಪಿನ ಬಗ್ಗೆ ವಿಚಾರಿಸಲಾಗುತ್ತಿದೆ. ರೈತರ ಜಮೀನು ಕಬಳಿಸುವ ಉದ್ದೇಶ ಸರ್ಕಾರದ್ದಲ್ಲ. ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ರೈತರಿಗೆ ನೀಡಿದ ನೋಟಿಸ್ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದಾರೆ.