ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ದಾಳಿ ಮತ್ತಷ್ಟು ತೀವ್ರಗೊಂಡಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ ಅಧ್ಯಕ್ಷ ವೊಲೊಡೊಮಿರ್ ಝಲೆನ್ಸ್ಕಿ ಅವರಿಗೆ ಕರೆ ಮಾಡಿ ಚರ್ಚೆ ನಡೆಸಿದ್ದು, ಭಾರತೀಯರ ಸುರಕ್ಷಿತ ಸ್ಥಳಾಂತರದ ಬಗ್ಗೆ ಮಾತುಕತೆ ನಡೆಸಿದ್ದಾರೆ.
ದೂರವಾಣಿ ಮೂಲಕ ಉಕ್ರೇನ್ ಅಧ್ಯಕ್ಷ ಝಲೆನ್ಸ್ಕಿ ಗೆ ಕರೆ ಮಾಡಿದ ಪ್ರಧಾನಿ ಮೋದಿ, ಉಕ್ರೇನ್ ನಲ್ಲಿ ಸಧ್ಯದ ಸ್ಥಿತಿಗತಿ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಸುಮಾರು 35 ನಿಮಿಷಗಳ ಕಾಲ ಉಭಯ ದೇಶಗಳ ನಾಯಕರು ಚರ್ಚೆ ನಡೆಸಿದ್ದು, ಈ ವೇಳೆ ಉಕ್ರೇನ್ ನಲ್ಲಿ ಭಾರತೀಯರ ಪರಿಸ್ಥಿತಿ, ಸುರಕ್ಷಿತ ಸ್ಥಳಾಂತರದ ಬಗ್ಗೆಯೂ ಮಾತನಾಡಿದ್ದಾರೆ.
Shocking: ಪತ್ನಿ ಎದುರೇ ತನ್ನನ್ನು ತಾನು ಶೂಟ್ ಮಾಡಿಕೊಂಡ ವೈದ್ಯ…!
ಈ ವೇಳೆ ಭಾರತೀಯರ ಸುರಕ್ಷಿತ ಸ್ಥಳಾಂತರಕ್ಕೆ ಯಾವುದೇ ತೊಂದರೆಯಾಗದು ಎಂದು ಉಕ್ರೇನ್ ಅಧ್ಯಕ್ಷರು ಭರವಸೆ ನೀಡಿದ್ದಾರೆ. ಭಾರತೀಯರ ರಕ್ಷಣೆಗೆ ಸಹಕಾರ ನೀಡಿದ್ದಕ್ಕಾಗಿ ಪ್ರಧಾನಿ ಮೋದಿ ಧನ್ಯವಾದ ಹೇಳಿದ್ದಾರೆ ಎಂದು ತಿಳಿದುಬಂದಿದೆ.