ಕೀವ್: ಉಕ್ರೇನ್ ಮೇಲೆ ರಷ್ಯಾ ಸೇನೆ ಯುದ್ಧ ಮುಂದುವರೆಸಿದ್ದು, ಉಕ್ರೇನ್ ಸಂಪೂರ್ಣ ರಣಾಂಗಣವಾಗಿದೆ. ಯುದ್ಧ ನಿಲ್ಲಿಸುವಂತೆ ಜಗತ್ತಿನ ಬಹುತೇಕ ರಾಷ್ಟ್ರಗಳು ರಷ್ಯಾಗೆ ಮನವಿ ಮಾಡಿದರೂ ಲೆಕ್ಕಿಸದ ರಷ್ಯಾ ವಿರುದ್ಧ ಇದೀಗ ಉಕ್ರೇನ್ ಅಂತರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿದೆ.
ರಷ್ಯಾ ಮಿಲಿಟರಿ ಪಡೆ ಉಕ್ರೇನ್ ಮೇಲೆ ಯುದ್ಧ ಸಾರಿದ್ದು, ಸೇನಾ ನೆಲೆ, ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿ ನರಮೇಧ ನಡೆಸುತ್ತಿದೆ. ರಷ್ಯಾ ಮಿಲಿಟರಿ ಚಟುವಟಿಕೆ ನಿಲ್ಲಿಸುವಂತೆ ಆದೇಶ ನೀಡಬೇಕು ಎಂದು ಉಕ್ರೇನ್ ಅಂತರಾಷ್ಟ್ರೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.
ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್ ದರ 10 ರೂಪಾಯಿ ಹೆಚ್ಚಳ ಸಾಧ್ಯತೆ
ಈ ಮಧ್ಯೆ ರಷ್ಯಾ ದಾಳಿಯಿಂದಾಗಿ ಉಕ್ರೇನ್ ನಲ್ಲಿ ನಿರಾಶ್ರಿತರ ಸಂಖ್ಯೆ 3,68,000ಕ್ಕೆ ಏರಿಕೆಯಾಗಿದೆ ಎಂದು ವಿಶ್ವಸಂಸ್ಥೆ ಮಾಹಿತಿ ನೀಡಿದೆ.
ಉಕ್ರೇನ್ ಮೇಲೆ ರಷ್ಯಾ ಯುದ್ಧ ಹಿನ್ನೆಲೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಅಂತರಾಷ್ಟ್ರೀಯ ಜೂಡೋ ಫೆಡರೇಷನ್ (IJF) ಗೌರವಾಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಲಾಗಿದೆ ಎಂದು ಕ್ರೀಡಾ ಆಡಳಿತ ಮಂಡಳಿ ತಿಳಿಸಿದೆ.