ಬೆಂಗಳೂರು: ಕಳೆದ ಹತ್ತು ದಿನಗಳ ನಿರಂತರ ಯುದ್ಧದ ಬಳಿಕ ಉಕ್ರೇನ್ ನ ಎರಡು ನಗರಗಳಲ್ಲಿ ರಷ್ಯಾ ತಾತ್ಕಾಲಿಕ ಕದನ ವಿರಾಮ ಘೋಷಣೆ ಮಾಡಿದೆ. ಈ ನಡುವೆ ರಷ್ಯಾ ಮಿಲಿಟರಿ ಪಡೆ ವಿರುದ್ಧ ಉಕ್ರೇನ್ ಗಂಭೀರ ಆರೋಪ ಮಾಡಿದೆ.
ಉಕ್ರೇನ್ ನಲ್ಲಿ ಬೀಡುಬಿಟ್ಟಿರುವ ರಷ್ಯಾ ಪಡೆಗಳು ಮಹಿಳೆಯರ ಮೇಲೆ ಅತ್ಯಾಚರವೆಸಗುತ್ತಿದ್ದಾರೆ ಎಂದು ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ತಿಳಿಸಿದ್ದಾರೆ.
ಉಕ್ರೇನ್ ಮೇಲಿನ ರಷ್ಯಾ ಆಕ್ರಮಣ ಶಿಕ್ಷಿಸಲು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ನ್ಯಾಯಮಂಡಳಿ ರಚನೆಯಾಗಬೇಕು ಎಂದು ಒತ್ತಾಯಿಸಿರುವ ಅವರು, ರಷ್ಯಾ ಪಡೆಗಳು ಆಕ್ರಮಿಸಿರುವ ಉಕ್ರೇನ್ ಹಲವು ನಗರಗಳಲ್ಲಿ ಮಹಿಳೆಯರ ಮೇಲೆ ಸೈನಿಕರು ಅತ್ಯಾಚಾರ ನಡೆಸುತ್ತಿದ್ದಾರೆ ಎಂದಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ವಿವರ ನೀಡಿಲ್ಲ.
ವಿದೇಶಾಂಗ ಸಚಿವರ ಈ ಆರೋಪ ಅಂತರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಅಲ್ಲದೇ ಉಕ್ರೇನ್ ನಲ್ಲಿ ಸಂಭವಿಸಿದ ಸಾವು-ನೋವು, ಜನರ ಸಮಸ್ಯೆ ಪರಿಹಾರ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕಾನೂನು ರಚನೆ ಬಗ್ಗೆಯೂ ಸಮಾಲೋಚನೆ ನಡೆದಿದೆ.