ನವದೆಹಲಿ; ಯುದ್ಧ ಪೀಡಿತ ಉಕ್ರೇನ್ ನಲ್ಲಿ ಸಿಲುಕಿದ್ದ 20,000 ಭಾರತೀಯರ ಪೈಕಿ 17,000 ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.
17,000 ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ. 3000 ವಿದ್ಯಾರ್ಥಿಗಳ ಪೈಕಿ 798 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್ ಆಗಿದ್ದಾರೆ. ಹಂಗೇರಿ, ಪೋಲ್ಯಾಂಡ್, ರೊಮೇನಿಯಾ ಮೂಲಕ ವಿದ್ಯಾರ್ಥಿಗಳನ್ನು ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರೀಂದಮ್ ಬಗಚಿ ತಿಳಿಸಿದ್ದಾರೆ.
ಇನ್ನು ಉಕ್ರೇನ್ ನಲ್ಲಿ ಸಿಲುಕಿದ್ದ 138 ಕನ್ನಡಿಗ ವಿದ್ಯಾರ್ಥಿಗಳು ದೆಹಲಿಗೆ ಆಗಮಿಸಿದ್ದು, ಅವರಲ್ಲಿ 76 ವಿದ್ಯಾರ್ಥಿಗಳು ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.