ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ. 7 ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದ್ದು, ಜೆಡಿಎಸ್ ಎರಡು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಕ್ಕೇರಲಿದೆ. ಬಿಜೆಪಿ ಮಡಿಕೇರಿಯಲ್ಲಿ ಜಯಗಳಿಸಿದೆ.
ಬಳ್ಳಾರಿ ಮಹಾನಗರ ಪಾಲಿಕೆ, ಭದ್ರಾವತಿ ನಗರಸಭೆ, ಬೇಲೂರು ಪುರಸಭೆ, ಬೀದರ್, ರಾಮನಗರ ನಗರಸಭೆ, ತೀರ್ಥಹಳ್ಳಿ, ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ. ಚನ್ನಪಟ್ಟಣ ನಗರಸಭೆ ಮತ್ತು ವಿಜಯಪುರ ಪುರಸಭೆಯಲ್ಲಿ ಜೆಡಿಎಸ್ ಜಯಗಳಿಸಿದ್ದು, ಮಡಿಕೇರಿ ನಗರಸಭೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳ 263 ವಾರ್ಡ್ ಗಳಿಗೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ 120, ಬಿಜೆಪಿ 57, ಜೆಡಿಎಸ್ 64 ವಾರ್ಡ್ಗಳಲ್ಲಿ ಜಯಗಳಿಸಿದೆ.