ಬೆಂಗಳೂರು: ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಜನವರಿ 3 ಮತ್ತು 4ರಂದು ಶೀತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಉಷ್ಣಾಂಶ ಕನಿಷ್ಠ ಮಟ್ಟಕ್ಕೆ ಕುಸಿಯುವ ಸಂಭವವಿದೆ. ಇದರೊಂದಿಗೆ ಶೀತ ಗಾಳಿ ಬೀಸಲಿದ್ದು, ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ವಿಜಯಪುರ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಶುಕ್ರವಾರ ವಿಜಯಪುರ ಜಿಲ್ಲೆಯಲ್ಲಿ 10 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ರಾಜ್ಯದ ವಿವಿಧೆಡೆ ಚಳಿಯ ತೀವ್ರತೆ ಹೆಚ್ಚಾಗುವ ಸಂಭವ ಇದೆ ಎಂದು ಹೇಳಲಾಗಿದೆ.