alex Certify ಎಫ್ಐಆರ್, ನೋಟಿಸ್ ಪ್ರತಿ ಕೊಡದೇ ಅಕ್ರಮ ಬಂಧನ: ಜಾಮೀನು ಪಡೆದ ಕಾಂಗ್ರೆಸ್ ನಾಯಕ ಪವನ್ ಖೇರಾ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಫ್ಐಆರ್, ನೋಟಿಸ್ ಪ್ರತಿ ಕೊಡದೇ ಅಕ್ರಮ ಬಂಧನ: ಜಾಮೀನು ಪಡೆದ ಕಾಂಗ್ರೆಸ್ ನಾಯಕ ಪವನ್ ಖೇರಾ ಆಕ್ರೋಶ

ನವದೆಹಲಿ: ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ದೆಹಲಿಯ ದ್ವಾರಕಾ ನ್ಯಾಯಾಲಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. 30,000 ರೂಪಾಯಿ ಬಾಂಡ್ ಸಲ್ಲಿಸಲು ಸೂಚಿಸಿ ನ್ಯಾಯಾಲಯ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.

ಜಾಮೀನು ಪಡೆದ ನಂತರ ತಮ್ಮ ಮೊದಲ ಹೇಳಿಕೆಯಲ್ಲಿ ಖೇರಾ ಅವರು, ನನ್ನನ್ನು ಅಕ್ರಮವಾಗಿ ಬಂಧಿಸಲಾಗಿದೆ. ಎಫ್‌ಐಆರ್ ಮತ್ತು ನೋಟಿಸ್‌ನ ಪ್ರತಿಯನ್ನು ಒದಗಿಸದೆ, ನನ್ನನ್ನು ವಿಮಾನದಿಂದ ಇಳಿಸಲಾಯಿತು. ಅಸ್ಸಾಂ ಪೊಲೀಸರು ಅಕ್ರಮವಾಗಿ ಬಂಧಿಸಿದರು. ಇಂದು ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದಾರೆ.

ನಮ್ಮ ಹೋರಾಟ ಈ ರಾಷ್ಟ್ರವನ್ನು ರಕ್ಷಿಸುವುದು, ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸುವುದಾಗಿದೆ. ನನ್ನ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹೋರಾಟವನ್ನು ನಿರ್ಭೀತವಾಗಿ ನಡೆಸುತ್ತಿದ್ದಾರೆ, ನಾನು ಅವರ ಪ್ರಯತ್ನವನ್ನು ಬಲಪಡಿಸುತ್ತೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧಿವೇಶನಕ್ಕಾಗಿ ರಾಯ್‌ಪುರಕ್ಕೆ ತೆರಳುತ್ತಿದ್ದ ಪವನ್ ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ರಾಯ್‌ಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಿಂದ ಕೆಳಗಿಳಿದ ನಂತರ ಅಸ್ಸಾಂ ಪೊಲೀಸರು ಮುಂಜಾನೆ ಬಂಧಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂನ ವಿವಿಧೆಡೆ ಅವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.

ಅವರ ಬಂಧನವನ್ನು ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರತಿಪಕ್ಷಗಳು ಸಂಸತ್ತಿನಲ್ಲಿ ವಿಷಯ ಪ್ರಸ್ತಾಪಿಸಿದರೆ ನೋಟಿಸ್ ನೀಡಲಾಗುತ್ತದೆ. ಕಾಂಗ್ರೆಸ್ ಸರ್ವಸದಸ್ಯ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದ ನಮ್ಮ ನಾಯಕರ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಲಾಗಿದೆ. ಇಂದು ನಮ್ಮ ಮಾಧ್ಯಮ ವಿಭಾಗದ ಅಧ್ಯಕ್ಷರನ್ನು ಬಲವಂತವಾಗಿ ವಿಮಾನದಿಂದ ಕೆಳಗಿಳಿಸಿ ಬಂಧಿಸಲಾಯಿತು. ಮೋದಿ ಸರ್ಕಾರ ಭಾರತದ ಪ್ರಜಾಪ್ರಭುತ್ವವನ್ನು ಹಿಟ್ಲರ್‌ಶಾಹಿಯನ್ನಾಗಿ ಮಾಡಿದೆ. ಈ ಸರ್ವಾಧಿಕಾರವನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಕಾಂಗ್ರೆಸ್ ಹಿರಿಯ ನಾಯಕ ಪವನ್ ಖೇರಾ ಅವರನ್ನು ಅಸ್ಸಾಂ ಪೊಲೀಸರು ವಿಮಾನದಿಂದ ಕೆಳಗಿಳಿಸಿದ್ದಾರೆ. ಅಸ್ಸಾಂ ಪೊಲೀಸರು ದೆಹಲಿಗೆ ಬಂದು ಇಂತಹ ಕೃತ್ಯವೆಸಗುವ ತುರ್ತು ಪರಿಸ್ಥಿತಿಯಾದರೂ ಏನು ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...