ಟೀಮ್ ಇಂಡಿಯಾದ ಆಲ್-ರೌಂಡರ್ ಆಟಗಾರ ವಾಷಿಂಗ್ಟನ್ ಸುಂದರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸೌಮ್ಯ ಗುಣಲಕ್ಷಣಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.
ವಾಶಿಂಗ್ಟನ್ ಸುಂದರ್ ಕೊರೊನಾ ಸೋಂಕಿಗೊಳಗಾಗಿರುವ ಕಾರಣ, ಅವರು ಜನವರಿ 19 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹಿಂದೆ ಸರಿಯುವ ಸಾಧ್ಯತೆ ಇದೆ.
ಪ್ರಸ್ತುತ ಟೀಮ್ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯ ಆಡುತ್ತಿದ್ದು, ಈಗ ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ಮೂರನೇ ಟೆಸ್ಟ್ ನಡೆಯುತ್ತಿದೆ.