
ಮಾತಾ ವೈಷ್ಣೋದೇವಿ ಮಂದಿರಕ್ಕೆ ಶಾರುಖ್ ಖಾನ್ ಭೇಟಿ ನೀಡಿದ ವೇಳೆ ಆತ್ಮೀಯರು ಅವರೊಂದಿಗೆ ಇದ್ದರು. ಶಾರುಖ್ ಖಾನ್ ಕೆಲ ದಿನಗಳ ಹಿಂದಷ್ಟೇ ಮುಸ್ಲಿಮರ ಪವಿತ್ರ ಯಾತ್ರಾಸ್ಥಳ ಮೆಕ್ಕಾಗೆ ಭೇಟಿ ನೀಡಿದ್ದು, ಇದರ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.
ಶಾರುಖ್ ಖಾನ್ ಅಭಿನಯದ ‘ಪಠಾಣ್’ ಸಿನಿಮಾ 2023ರ ಜನವರಿ 25ರಂದು ವಿಶ್ವದಾದ್ಯಂತ ತೆರೆ ಕಾಣಲಿದ್ದು, ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಜಾನ್ ಅಬ್ರಹಾಂ ಮೊದಲಾದವರು ನಟಿಸಿದ್ದಾರೆ. ಈ ಚಿತ್ರ ಬಾಕ್ಸಾಫೀಸ್ ನಲ್ಲಿ ಕಮಾಲ್ ಮಾಡಬಹುದೆಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.