alex Certify WATCH | ವೈಷ್ಣೋದೇವಿ ಮಂದಿರಕ್ಕೆ ನಟ ಶಾರುಖ್ ಭೇಟಿ; ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

WATCH | ವೈಷ್ಣೋದೇವಿ ಮಂದಿರಕ್ಕೆ ನಟ ಶಾರುಖ್ ಭೇಟಿ; ವಿಡಿಯೋ ವೈರಲ್

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಶಾರುಖ್ ಖಾನ್ ಇಂದು ಜಮ್ಮುವಿನ ಮಾತಾ ವೈಷ್ಣೋದೇವಿ ಮಂದಿರಕ್ಕೆ ಭೇಟಿ ನೀಡಿದ್ದು, ಇದರ ವಿಡಿಯೋವನ್ನು ಶಾರುಖ್ ಖಾನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದ ತಮ್ಮ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಮಾತಾ ವೈಷ್ಣೋದೇವಿ ಮಂದಿರಕ್ಕೆ ಶಾರುಖ್ ಖಾನ್ ಭೇಟಿ ನೀಡಿದ ವೇಳೆ ಆತ್ಮೀಯರು ಅವರೊಂದಿಗೆ ಇದ್ದರು. ಶಾರುಖ್ ಖಾನ್ ಕೆಲ ದಿನಗಳ ಹಿಂದಷ್ಟೇ ಮುಸ್ಲಿಮರ ಪವಿತ್ರ ಯಾತ್ರಾಸ್ಥಳ ಮೆಕ್ಕಾಗೆ ಭೇಟಿ ನೀಡಿದ್ದು, ಇದರ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.

ಶಾರುಖ್ ಖಾನ್ ಅಭಿನಯದ ‘ಪಠಾಣ್’ ಸಿನಿಮಾ 2023ರ ಜನವರಿ 25ರಂದು ವಿಶ್ವದಾದ್ಯಂತ ತೆರೆ ಕಾಣಲಿದ್ದು, ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಜಾನ್ ಅಬ್ರಹಾಂ ಮೊದಲಾದವರು ನಟಿಸಿದ್ದಾರೆ. ಈ ಚಿತ್ರ ಬಾಕ್ಸಾಫೀಸ್ ನಲ್ಲಿ ಕಮಾಲ್ ಮಾಡಬಹುದೆಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.

— Shah Rukh Khan (@iamsrk) November 30, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...