WATCH: ಕೆ.ಎಲ್. ರಾಹುಲ್ ಬಳಿಕ ವೈವಾಹಿಕ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾದ ಮತ್ತೊಬ್ಬ ಆಟಗಾರ

ಜನವರಿ 25ರ ಬುಧವಾರದಂದು ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕೆ.ಎಲ್. ರಾಹುಲ್ ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರ ಪುತ್ರಿ ಆಥಿಯಾ ಶೆಟ್ಟಿ ಜೊತೆ ಅದ್ದೂರಿಯಾಗಿ ವಿವಾಹವಾಗಿದ್ದಾರೆ. ಸುನಿಲ್ ಶೆಟ್ಟಿ ಅವರ ಖಂಡಾಲ ಫಾರ್ಮ್ ಹೌಸ್ ನಲ್ಲಿ ನಡೆದ ಈ ವಿವಾಹ ಸಮಾರಂಭಕ್ಕೆ ಬಾಲಿವುಡ್ ನಟ – ನಟಿಯರು ಹಾಗೂ ಕ್ರೀಡಾ ಜಗತ್ತಿನ ಖ್ಯಾತನಾಮರು ಆಗಮಿಸಿದ್ದರು.

ಕೆ.ಎಲ್. ರಾಹುಲ್ ವಿವಾಹವಾದ ಮರುದಿನವೇ ಅಂದರೆ ಜನವರಿ 26ರ ಗುರುವಾರದಂದು ಟೀಮ್ ಇಂಡಿಯಾದ ಮತ್ತೊಬ್ಬ ಆಟಗಾರ ಅಕ್ಷರ್ ಪಟೇಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಗುಜರಾತಿನ ವಡೋದರದಲ್ಲಿ ನಡೆದ ಈ ವಿವಾಹ ಕಾರ್ಯಕ್ರಮದಲ್ಲಿ ಆಪ್ತರು ಹಾಗೂ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು.

ಅಕ್ಷರ್ ಪಟೇಲ್, ಮಹಾ ಪಟೇಲ್ ಅವರೊಂದಿಗೆ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದು, ಈ ಸಮಾರಂಭದ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಕ್ರಿಕೆಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಅಕ್ಷರ್ ಪಟೇಲ್, ವಿವಾಹ ಸಮಾರಂಭದ ಕಾರಣಕ್ಕಾಗಿ ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಿಂದ ಹಿಂದೆ ಸರಿದಿದ್ದರು.

https://twitter.com/AngryPakistan/status/1618657324490686464?ref_src=twsrc%5Etfw%7Ctwcamp%5Etweetembed%7Ctwterm%5E16186

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read