ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಸೋಮವಾರ ಬದರಿನಾಥ ಹೆದ್ದಾರಿಯಲ್ಲಿ ಲಂಬಗಡ ಚರಂಡಿಯಲ್ಲಿ ಸಿಲುಕಿಕೊಂಡಿದ್ದ ಕಾರನ್ನು ಗಡಿ ರಸ್ತೆ ಸಂಸ್ಥೆ (ಬಿಆರ್‌ಒ) ಸುರಕ್ಷಿತವಾಗಿ ಎಳೆದಿದೆ. ಈ ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಆನ್‌ಲೈನ್‌ನಲ್ಲಿ ಭಾರಿ ವೈರಲ್ ಆಗಿದೆ.
ಬೆಚ್ಚಿಬೀಳಿಸುವಂತಿದೆ ಈ ಸುದ್ದಿ..! ಟಿಕ್ ಟಾಕ್ ವೀಕ್ಷಣೆಯಿಂದ ಹೆಚ್ಚಾಗ್ತಿದೆ ಟಿಕ್ ಡಿಸಾರ್ಡರ್
ಉತ್ತರಾಖಂಡದ ಋಷಿಕೇಶ್-ಬದರಿನಾಥ್ ಹೆದ್ದಾರಿಯನ್ನು ನಿರ್ಬಂಧಿಸಲಾಗಿದ್ದು, ಸಿರೋಬಗಡ್‌ನಲ್ಲಿ ಡಜನ್ಗಟ್ಟಲೆ ವಾಹನಗಳು ಹಾನಿಯಾಗಿವೆ. ಖಂಖ್ರಾ-ಖೇಡಾಖಾಲ್-ಖಿರ್ಸು ಸಂಪರ್ಕ ರಸ್ತೆ ಕೂಡ ಭೂಕುಸಿತದಿಂದಾಗಿ ನಿರ್ಬಂಧಿಸಲಾಗಿದೆ. ಕಳೆದ 4 ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.
ಉತ್ತರಾಖಂಡದ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಏಳು ಸ್ಥಳಗಳಲ್ಲಿ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಡಳಿತ ಮಂಗಳವಾರ ತಿಳಿಸಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸೋಮವಾರ ರಾತ್ರಿಯಿಂದ ವಿದ್ಯುತ್ ಕಡಿತವಾಗಿದೆ.
ರಜೆ ಕಡಿತವಾಗಿ ಭಾನುವಾರವೂ ಶಾಲೆ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ಸಂಡೇ ನೋ ಕ್ಲಾಸ್, ಪಠ್ಯ ಕಡಿತ ಇಲ್ಲ
ಮುಂಜಾಗ್ರತಾ ಕ್ರಮವಾಗಿ ಬದರಿನಾಥ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಬದರಿನಾಥ ದೇವಸ್ಥಾನಕ್ಕೆ ಹೋಗುವ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ.
ನಂದಾಕಿನಿ ನದಿಯಲ್ಲಿ ನೀರಿನ ಮಟ್ಟ ಕೂಡ ಗಣನೀಯವಾಗಿ ಏರಿಕೆಯಾಗಿದ್ದು, ಅಪಾಯದ ಮಟ್ಟ ತಲುಪುತ್ತಿದೆ. ಡೆಹ್ರಾಡೂನ್ ಹವಾಮಾನ ಕೇಂದ್ರದ ಪ್ರಕಾರ, ಚಮೋಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 19.8 ಮಿಮೀ ಮಳೆಯಾಗಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಉತ್ತರಾಖಂಡಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ರಾಜ್ಯದಲ್ಲಿ ಭಾರಿ ಮತ್ತು ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.