
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ತುರ್ತು ಸತ್ತ – ಗಂಧವ್ನಲ್ಲಿ 3 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ತುರ್ತು ಲ್ಯಾಂಡಿಂಗ್ ಸೌಲಭ್ಯವನ್ನು ಅಭಿವೃದ್ಧಿಪಡಿಸಿದೆ. ಭಾರತಮಾನಾ ಯೋಜನೆಯ ಅಡಿಯಲ್ಲಿ ನಿರ್ಮಾಣವಾದ ತುರ್ತು ಭೂ ಸ್ಪರ್ಶ ಸೌಕರ್ಯ ಇದಾಗಿದೆ.
ಗಗರಿಯಾ – ಭಕಾಸರ್ನಲ್ಲೂ ಉದ್ದದ ರಸ್ತೆ ನಿರ್ಮಿಸಲಾಗಿದ್ದು ವಿಮಾನಗಳ ತುರ್ತು ಭೂಸ್ಪರ್ಶಕ್ಕೆ ವ್ಯವಸ್ಥೆ ಮಾಡಲಾಗಿದೆ. ಒಟ್ಟು 765.52 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಏರ್ ಸ್ಟ್ರಿಪ್ಗಳು ವಾಯುಪಡೆಯು ತುರ್ತು ಭೂಸ್ಪರ್ಶಕ್ಕೆ ಬಳಕೆ ಮಾಡಲಿರುವ ಮೊದಲ ರಾಷ್ಟ್ರೀಯ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯಶಸ್ಸಿಗೆ ಹಿಡಿದ ಕೈಗನ್ನಡಿಯಾಗಿದೆ.