ಖುಷಿನಗರ (ಉತ್ತರ ಪ್ರದೇಶ) ರೈಲಿನ ಸ್ಲೀಪರ್ ಬೋಗಿಯ ಕಾರಿಡಾರ್ನಲ್ಲಿ ಕೆಲವರು ನಮಾಜ್ ಸಲ್ಲಿಸಿರುವ ಘಟನೆ ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದಿದೆ.
ಇದರಿಂದ ಹಲವು ಪ್ರಯಾಣಿಕರು ತೊಂದರೆ ಅನುಭವಿಸಬೇಕಾಯಿತು ಎನ್ನಲಾಗಿದೆ.
ಬಿಜೆಪಿಯ ಮಾಜಿ ಶಾಸಕ ದೀಪಲಾಲ್ ಭಾರ್ತಿ ಅವರು ಇದರ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಇದನ್ನು ಸ್ಥಳೀಯ ಗ್ರಾಮ ಪಂಚಾಯಿತಿಗೂ ಅವರು ನೀಡಿದ್ದಾರೆ.
ಸತ್ಯಾಗ್ರಹ ಎಕ್ಸ್ಪ್ರೆಸ್ನ ಸ್ಲೀಪರ್ ಬೋಗಿಯಲ್ಲಿ ಈ ರೀತಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಅವರು ಹೇಳಿದ್ದಾರೆ. ಇಂಥ ಕೃತ್ಯಗಳನ್ನು ತಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಅವದೇಶ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.