
ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ ಎಂಬ ಗಾದೆ ಮಾತಿದೆ. ಮಧ್ಯಪ್ರದೇಶದ ಜಬಲ್ಪುರ ಪ್ಯಾರಾಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಈ ಮಾತನ್ನು ತಮ್ಮ ಪ್ರತಿಭಟನೆಯ ಮೂಲಕ ಮಾಡಿ ತೋರಿಸಿದ್ದಾರೆ.
ಬಹು ಕಾಲದಿಂದ ತಮ್ಮ ಬೇಡಿಕೆಯನ್ನು ಈಡೇರಿಸದ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರ ಹಾಕುವ ಸಲುವಾಗಿ ಎಮ್ಮೆಯ ಮುಂದೆ ಕೊಳಲು ಊದಿದ್ದಾರೆ.
ವಿದ್ಯಾರ್ಥಿಗಳು ರಾಜ್ಯ ಸರ್ಕಾರವನ್ನು ಎಚ್ಚರಿಸಿ ಪರೀಕ್ಷೆ ಬೇಡ, ಮತ ಬೇಡ ಎಂದು ಬೀದಿಗಿಳಿದು ಘೋಷಣೆಗಳನ್ನು ಕೂಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಪುನರಾವರ್ತಿತ ಪರೀಕ್ಷೆಗಳು ಬಾಕಿ ಉಳಿದಿದೆ. ಹಾಗೂ ವಿಶ್ವ ವಿದ್ಯಾಲಯಗಳು ತಮ್ಮ ಮನವಿಗೆ ಗಮನವೇ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.