ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪಕ್ಷದ ಸಂಸದ ಕೆ.ಸಿ. ವೇಣುಗೋಪಾಲ್ ಅವರನ್ನು ದೆಹಲಿ ಪೊಲೀಸರು ಧರಧರನೆ ಎಳೆದೊಯ್ದಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಂಸದರಾದ ವೇಣುಗೋಪಾಲ್, ಜೈರಾಮ್ ರಮೇಶ್ ಮತ್ತು ದೀಪೇಂದರ್ ಹೂಡಾ ಸೇರಿದಂತೆ ಕಾಂಗ್ರೆಸ್ ಉನ್ನತ ಪದಾಧಿಕಾರಿಗಳು ಐಕಮತ್ಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ವೇಳೆ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ವೇಣುಗೋಪಾಲ್ ಅವರೊಂದಿಗೆ ಪೊಲೀಸರು ಅಮಾನುಷವಾಗಿ ನಡೆದುಕೊಂಡಿದ್ದಾರೆ ಎಂದು ವಿಡಿಯೋವನ್ನು ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಹಂಚಿಕೊಂಡಿದ್ದಾರೆ. ರಾಜ್ಯಸಭಾ ಸಂಸದ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ದೆಹಲಿ ಪೊಲೀಸರ ಈ ವರ್ತನೆ ಅತ್ಯಂತ ಖಂಡನೀಯ ಎಂದು ಬರೆದುಕೊಂಡಿದ್ದಾರೆ.