ಗೋಲ್ಡನ್ ಗ್ಲೋಬ್ಸ್‌ನಲ್ಲಿ ನಾಟು ನಾಟು ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಎಸ್‌ಎಸ್ ರಾಜಮೌಳಿ ಅವರ ಆರ್‌ಆರ್‌ಆರ್ ಇತಿಹಾಸವನ್ನು ಸೃಷ್ಟಿಸಿದೆ. ಇದೀಗ ಭಾರತದಲ್ಲಿನ ಅಮೆರಿಕದ ರಾಯಭಾರ ಕಚೇರಿಯು ಐತಿಹಾಸಿಕ ಗೆಲುವಿಗಾಗಿ ಆರ್‌ಆರ್‌ಆರ್ ತಂಡವನ್ನು ಅಭಿನಂದಿಸಿದೆ. ಇದರ ವಿಡಿಯೋ ವೈರಲ್ ಆಗಿದೆ.
ಈ ವಿಡಿಯೋದಲ್ಲಿ ಅಮೆರಿಕದ ರಾಯಭಾರ ಕಚೇರಿಯು ದೀಪಾವಳಿ ಸಂಭ್ರಮದಂತೆ ಕಾಣಿಸುತ್ತಿದೆ. ಜನರು ವರ್ಣರಂಜಿತ ಉಡುಪುಗಳನ್ನು ಧರಿಸಿ ನೃತ್ಯ ಮಾಡುತ್ತಿದ್ದಾರೆ. ಸಂಗೀತ ಸಂಯೋಜಕ ಎಂಎಂ ಕೀರವಾಣಿ, ನಿರ್ದೇಶಕ ಎಸ್‌ಎಸ್ ರಾಜಮೌಳಿ ಮತ್ತು ಆರ್‌ಆರ್‌ಆರ್‌ನ ಇಡೀ ತಂಡವನ್ನು ಇದಕ್ಕೆ ಟ್ಯಾಗ್ ಮಾಡಲಾಗಿದೆ. ಗೆಲುವಿಗಾಗಿ ಅವರನ್ನು ಅಭಿನಂದಿಸಲಾಗಿದೆ.
“ಇದು ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಹಾಡು ಮತ್ತು ಜಾಗತಿಕ ಮಟ್ಟದಲ್ಲಿ ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟಕ್ಕೆ ಕರೆದುಕೊಂಡು ಹೋಗಿದೆ” ಎಂದು ಶೀರ್ಷಿಕೆ ಕೊಡಲಾಗಿದೆ. ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಸಹ ಪ್ರೀತಿಯ ಕ್ಲಿಪ್ ಅನ್ನು ಹಂಚಿಕೊಂಡಿದೆ.