
ಟೋಕಿಯೊ ಒಲಿಂಪಿಕ್ಸ್ 2021ರಲ್ಲಿ ನೀರಜ್ ಚೋಪ್ರಾ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕವನ್ನು ಪಡೆದಿದ್ದರು. ಹೀಗಾಗಿ ಇವರಿಗೆ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ನೀರಜ್ ಹೊರತುಪಡಿಸಿ, ಬೆಳ್ಳಿ ಪದಕ ವಿಜೇತ ಕುಸ್ತಿಪಟು ರವಿಕುಮಾರ್ ದಹಿಯಾ, ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಮತ್ತು ಪ್ಯಾರಾಲಿಂಪಿಕ್ ಕ್ರೀಡಾಕೂಟದ ಪದಕ ವಿಜೇತರಾದ ಅವನಿ ಲೆಖರಾ, ಪ್ರಮೋದ್ ಭಗತ್, ಕೃಷ್ಣ ನಗರ, ಸುಮಿತ್ ಆಂಟಿಲ್, ಮನೀಶ್ ನರ್ವಾಲ್, ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ಮತ್ತು ರಾಷ್ಟ್ರೀಯ ಫುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಜೊತೆಗೆ ಗೋಲ್‌ಕೀಪರ್ ಪಿ.ಆರ್. ಶ್ರೀಜೇಶ್ ಅವರನ್ನೂ ಗೌರವಿಸಲಾಗಿದೆ.
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ನಾಲ್ಕು ದಶಕಗಳ ಅಂತರದ ನಂತರ ಐತಿಹಾಸಿಕ ಕಂಚಿನ ಪದಕ ಮತ್ತು ಪ್ಯಾರಾಲಿಂಪಿಕ್ಸ್ ಪದಕ ವಿಜೇತೆ ಭಾವಿನಾ ಪಟೇಲ್ ಅವರಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಒಟ್ಟು 35 ಮಂದಿ ಕ್ರೀಡಾ ಸಾಧಕರಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.