ಇಂದು ಇಂಟರ್ನೆಟ್‌ನಲ್ಲಿ ಟ್ರೆಂಡಿಂಗ್ ಆಗಿರೋದು ಏನು ಗೊತ್ತಾ? ಆರ್‌ಆರ್‌ಆರ್‌ನ ನಾಟು ನಾಟು ಹಾಡು. ಇದರಲ್ಲೇನು ವಿಶೇಷ ಅಂತೀರಾ? ಇದು ಎಲಾನ್ ಮಸ್ಕ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಎಡಿಟ್ ಮಾಡಿದ ವೀಡಿಯೊ.
ಪ್ರಧಾನಿ ನರೇಂದ್ರ ಮೋದಿಯವರು ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಅಮೆರಿಕಕ್ಕೆ ಹೋಗಿರುವ ಹಿನ್ನೆಲೆಯಲ್ಲಿ, ಅಲ್ಲಿ ಟ್ವಿಟರ್ ಮಾಲೀಕ ಎಲಾನ್ ಮಸ್ಕ್ ಮೋದಿಯವರ ಬಗ್ಗೆ ಗೌರವ ಮತ್ತು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇವರಿಬ್ಬರೂ ನಾಟುನಾಟುಗೆ ನೃತ್ಯ ಮಾಡಿದ ವಿಡಿಯೋ ವೈರಲ್ ಆಗಿದೆ.
RRR ಚಿತ್ರದ ಅಭಿಮಾನಿ ಒಬ್ಬರು ಆಸ್ಕರ್ ಪ್ರಶಸ್ತಿ ವಿಜೇತ ಹಾಡನ್ನು ಎಡಿಟ್ ಮಾಡಿದ್ದಾರೆ. ನಟರಾದ ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಆಗಿ ಪಿಎಂ ಮೋದಿ ಮತ್ತು ಎಲೋನ್ ಮಸ್ಕ್ ಅವರನ್ನು ಸೇರ್ಪಡೆ ಮಾಡಲಾಗಿದೆ. ನಂತರ ವೀಡಿಯೊವನ್ನು ಚಮತ್ಕಾರಿ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ: “ವೆನ್ ಲೆಜೆಂಡ್ಸ್ ಮೀಟ್”