ಬೆಂಗಳೂರು : ತೆರಿಗೆ ಸೋರಿಕೆ, ತೆರಿಗೆ ವಂಚನೆ ಬಗ್ಗೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ‘ಸಿಎಂ ಸಿದ್ದರಾಮಯ್ಯ’ ಖಡಕ್ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಸೇರಿ ಹಲವು ಇಲಾಖೆಗಳ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ರಾಜ್ಯದಲ್ಲಿ ತೆರಿಗೆ ವಂಚನೆ, , ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ. ಶೇ. 24ರ ಬೆಳವಣಿಗೆ ಗುರಿಯನ್ನು ನೀಡಲಾಗಿರುವುದನ್ನು ವಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಈ ಗುರಿ ದಾಟಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ತೆರಿಗೆ ವಂಚನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ತೆರಿಗೆ ಸೋರಿಕೆ ತಡೆಗಟ್ಟಲು ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಶೇ.19.2ರಷ್ಟಿದ್ದು, ಇದು ದೇಶದಲ್ಲಿಯೇ ಅತಿ ಹೆಚ್ಚು . ದೇಶದ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.15ರಷ್ಟು ಮಾತ್ರ ಇದೆ. ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು ಶೇ. 9.4 ರಷ್ಟಿದೆ ಎಂದು ಅಧಿಕಾರಿಗಳು ಸಿಎಂ ಗೆ ಮಾಹಿತಿ ನೀಡಿದರು.ಹೆಚ್ಚು ತೆರಿಗೆ ಸಂಗ್ರಹ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಅನುಕೂಲವಾಗುತ್ತದೆ. ಈ ಹಿನ್ನೆಲೆ ಜವಾಬ್ದಾರಿ ಹೊತ್ತು ಎಲ್ಲರೂ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.