ಬೆಂಗಳೂರು : ಇದೇ ಅಕ್ಟೋಬರ್ 9ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯೊಂದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮ ಮುಂದೂಡಲಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಅಕ್ಟೋಬರ್ 09 ರಂದು ನಾನು ದೆಹಲಿ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಆ ದಿನ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ದೂರದ ಊರುಗಳಿಂದ ನನ್ನನ್ನು ಭೇಟಿ ಮಾಡಲು ಬರಬೇಕೆಂದಿದ್ದವರು ದಯವಿಟ್ಟು ಇದನ್ನು ಗಮನಿಸಿ ಎಂದಿದ್ದಾರೆ.
ಜನತಾ ದರ್ಶನದ ಮುಂದಿನ ದಿನಾಂಕ ನಂತರ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.