alex Certify ‘ಲವ್ ನ್ವಾಂಟಿಟಿ’ಗೆ ಸೊಂಟ ಬಳುಕಿಸಿದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲವ್ ನ್ವಾಂಟಿಟಿ’ಗೆ ಸೊಂಟ ಬಳುಕಿಸಿದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು

ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸುವ ಮುನ್ನ, ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ತಮ್ಮ ದೀಪಾವಳಿ ಆಚರಣೆಯ ಒಂದು ಝಲಕ್ ಅನ್ನು ಹಂಚಿಕೊಂಡಿದ್ದಾರೆ.

26 ವರ್ಷದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ‘ಲವ್ ನ್ವಾಂಟಿಟಿ’ ಗೆ ನೃತ್ಯ ಮಾಡುತ್ತಿರುವ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ತಿಳಿ ಹಸಿರು ಬಣ್ಣದ ಕಾಂಜೀವರಂ ಲೆಹೆಂಗಾವನ್ನು ಧರಿಸಿರುವ ಪಿ.ವಿ. ಸಿಂಧು ಮುದ್ದು ಮುದ್ದಾಗಿ ಸ್ಟೆಪ್ಸ್ ಹಾಕಿದ್ದಾರೆ.

ಅಪಹರಣಕ್ಕೊಳಗಾದ 16 ವರ್ಷದ ಬಾಲಕಿಗೆ ವರವಾದ ಟಿಕ್‌ ಟಾಕ್..!

ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಒಂದೇ ದಿನದಲ್ಲಿ ಈ ವಿಡಿಯೋವನ್ನು 1.2 ಮಿಲಿಯನ್ ಜನರು ವೀಕ್ಷಿಸಿದ್ದಾರೆ. ಬ್ಯಾಡ್ಮಿಂಟನ್ ತಾರೆಯ ನೃತ್ಯಕ್ಕೆ ನೆಟ್ಟಿಗರು ಮನಸೋತಿದ್ದಾರೆ.

ಇನ್ನು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪಿ.ವಿ. ಸಿಂಧು ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಪ್ರಶಸ್ತಿ ಸ್ವೀಕರಿಸಿದ ನಂತರ ಪಿ.ವಿ. ಸಿಂಧು ಭಾರತ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಇದೊಂದು ಹೆಮ್ಮೆಯ ಕ್ಷಣ ಎಂದು ಅವರು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...