alex Certify ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ವಿಡಿಯೋ ವೈರಲ್

ಗೋವಾ: ಕರಾವಳಿ ರಾಜ್ಯ ಗೋವಾ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೈಕ್ ಮೇಲೆ ಸವಾರಿ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಒಂದು ದಿನದ ಪ್ರವಾಸಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೋವಾದಲ್ಲಿ ಬೀಡುಬಿಟ್ಟಿದ್ದಾರೆ. ಆಜಾದ್ ಮೈದಾನಕ್ಕೆ ಆಗಮಿಸಿದ ಅವರು, ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ದ್ವಿಚಕ್ರ ವಾಹನದಲ್ಲಿ ಅಲ್ಲಿಂದ ತೆರಳಿದ್ದಾರೆ. ಈ ವಿಡಿಯೋವನ್ನು ರಾಜ್ಯ ಕಾಂಗ್ರೆಸ್ ಘಟಕ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದೆ.

ಇನ್ನು ಶನಿವಾರ ಬೆಳಿಗ್ಗೆ ರಾಜ್ಯದ ಕರಾವಳಿ ಗ್ರಾಮವಾದ ವೆಲ್ಸಾವೊದಲ್ಲಿ ಮೀನುಗಾರ ಸಮುದಾಯದ ಸದಸ್ಯರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...