ಪ್ರಾಣ ರಕ್ಷಣೆಗೆ ಬರುವ ಆಂಬುಲೆನ್ಸ್ ಡಿಕ್ಕಿಯಾಗಿ ವೃದ್ಧರ ಪ್ರಾಣವೇ ಹೋಗಿದೆ. ಪುಣೆಯಲ್ಲಿ ಆಂಬುಲೆನ್ಸ್ ಗೆ ಡಿಕ್ಕಿ ಹೊಡೆದು ಹಿರಿಯ ನಾಗರಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಘಟನೆಯ ದೃಶ್ಯ ದಾಖಲಾಗಿದೆ.
ಆರೋಗ್ಯ ಕೇಂದ್ರದ ಆಂಬ್ಯುಲೆನ್ಸ್ ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಆಕಸ್ಮಿಕವಾಗಿ ವಯೋವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರಿಗೆ ವೈದ್ಯಕೀಯ ನೆರವು ನೀಡಿದರೂ ಪ್ರಾಣ ಉಳಿಯಲಿಲ್ಲ.
ಹಿರಿಯ ನಾಗರಿಕರು ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ವಾಸಿಸುತ್ತಿದ್ದರು ಎಂದು ಗುರುತಿಸಲಾಗಿದೆ. ಪೊಲೀಸರು ಅಧಿಕಾರಿಗಳು ಘಟನೆಯ ಬಗ್ಗೆ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಸಿಸಿ ಕ್ಯಾಮೆರಾ ದೃಶ್ಯ ಸಂಗ್ರಹಿಸಿದ್ದು ಸಾಕ್ಷಿಗಳ ಹೇಳಿಕೆಗಳನ್ನು ಪಡೆದುಕೊಳ್ಳುತ್ತಿದ್ದಾರೆ.