
ಇಂದು (ನವೆಂಬರ್ 1) ಸಚಿನ್ ತೆಂಡೂಲ್ಕರ್ ಸಮ್ಮುಖದಲ್ಲಿಯೇ ಕ್ರಿಕೆಟ್ ದೇವರ ಈ ಪ್ರತಿಮೆಯು ಕ್ರೀಡಾಂಗಣದಲ್ಲಿ ಸ್ಥಾಪನೆಗೊಳ್ಳಲಿದೆ. 2023ರ ಐಸಿಸಿ ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಹಾಗೂ ಶ್ರೀಲಂಕಾ ವಿರುದ್ಧದ ಪಂದ್ಯದ ಮುನ್ನಾದಿನದಂದು ಈ ಕಾರ್ಯಕ್ರಮ ನಡೆಯುತ್ತಿದೆ, ಈ ಸಮಾರಂಭದಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹಾಗೂ ಡಿಸಿಎಂ ದೇವೇಂದ್ರ ಫಡ್ನವಿಸ್ ಸಹ ಭಾಗಿಯಾಗುತ್ತಿದ್ದಾರೆ.
ಈಗಾಗಲೇ ಸಚಿನ್ ತೆಂಡೂಲ್ಕರ್ ಸ್ಟ್ಯಾಂಡ್ ಬಳಿಯಲ್ಲಿ ಇರಿಸಲಾದ ಈ ಪ್ರತಿಮೆಗೆ ಅಂತಿಮ ಸ್ಪರ್ಶ ನೀಡುವ ಕಾರ್ಯ ಭರದಿಂದ ಸಾಗಿದೆ. ಏಪ್ರಿಲ್ 24ರಂದು ಐವತ್ತನೇ ವರ್ಷಕ್ಕೆ ಕಾಲಿಟ್ಟ ಭಾರತ ರತ್ನ ಪುರಸ್ಕೃತ ಸಚಿನ್ ತೆಂಡೂಲ್ಕರ್ರಿಗೆ ಸಮರ್ಪಿಸಲಾಗಿದೆ.