alex Certify Watch: ಪಾಕಿಸ್ತಾನ ವಿರುದ್ಧದ ಗೆಲುವನ್ನು ಪುಟ್ಟ ಮಕ್ಕಳಂತೆ ಸಂಭ್ರಮಿಸಿದ ಸುನಿಲ್ ಗವಾಸ್ಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Watch: ಪಾಕಿಸ್ತಾನ ವಿರುದ್ಧದ ಗೆಲುವನ್ನು ಪುಟ್ಟ ಮಕ್ಕಳಂತೆ ಸಂಭ್ರಮಿಸಿದ ಸುನಿಲ್ ಗವಾಸ್ಕರ್

ಭಾನುವಾರದಂದು ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಗೆಲುವು ಸಾಧಿಸಿದೆ. ಈ ರೋಚಕ ಗೆಲುವಿಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆಗಳ ಸುರಿಮಳೆಯನ್ನೇ ಹರಿಸಲಾಗುತ್ತಿದೆ.

ಅದರಲ್ಲೂ ಪಂದ್ಯಾವಳಿಯ ಅಂತಿಮ ಕ್ಷಣಗಳಲ್ಲಿ ವಿರಾಟ್ ಕೊಹ್ಲಿ ಅವರು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಕೇವಲ 53 ಎಸೆತಗಳಲ್ಲಿ ಅವರು ಬರೋಬ್ಬರಿ 82 ರನ್ ಗಳಿಸುವ ಮೂಲಕ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ.

ಇದರ ಮಧ್ಯೆ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ವೀಕ್ಷಿಸುತ್ತಿದ್ದ ಹಿರಿಯ ಕ್ರಿಕೆಟರ್ ಸುನಿಲ್ ಗವಾಸ್ಕರ್ ಭಾರತ ತಂಡ ಗೆಲ್ಲುತ್ತಿದ್ದಂತೆ ಸಂತಸ ತಡೆಯಲಾರದೆ ಪುಟ್ಟ ಮಕ್ಕಳಂತೆ ಕುಣಿದು ಕುಪ್ಪಳಿಸಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...