ನವದೆಹಲಿ: ಜಮ್ಮು ಮತ್ತು ಕಾಶ್ಮೀರವು ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ ನಡೆಸುತ್ತಿರುವಂತೆಯೇ, ಶ್ರೀನಗರದ ಐಕಾನಿಕ್ ‘ಘಂಟಾ ಘರ್’ ಮೇಲೆ ಗುರುವಾರ ತ್ರಿವರ್ಣ ಧ್ವಜವನ್ನು ಹಾರಿಸಲಾಗಿದೆ.
ನಗರದ ಹೃದಯಭಾಗದಲ್ಲಿರುವ ಪ್ರಸಿದ್ಧ ಗಡಿಯಾರ ಗೋಪುರವನ್ನು ಇತ್ತೀಚೆಗೆ ಶ್ರೀನಗರ ಸ್ಮಾರ್ಟ್ ಸಿಟಿ ಯೋಜನೆಯಡಿ ನವೀಕರಿಸಲಾಗಿದೆ.
ಶ್ರೀನಗರ ಸ್ಮಾರ್ಟ್ ಸಿಟಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಥರ್ ಅಮೀರ್ ಖಾನ್, ತ್ರಿವರ್ಣ ಧ್ವಜವನ್ನು ಹಾರಿಸುವುದು ನಗರಕ್ಕೆ ಐತಿಹಾಸಿಕ ಕ್ಷಣವಾಗಿದೆ. 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗಡಿಯಾರ ಗೋಪುರದ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲಾಯಿತು ಎಂದು ತಿಳಿಸಿದ್ದಾರೆ.
ಶ್ರೀನಗರದ ಘಂಟಾ ಘರ್ ಮತ್ತು ಲಾಲ್ ಚೌಕ್ ಗಳು ಬಹಳ ಅಪ್ರತಿಮ ಸ್ಥಳಗಳಾಗಿವೆ, ಇವುಗಳ ಮೇಲೆ ಆಜಾದಿ ಕಾ ಅಮೃತ್ ಮಹೋತ್ಸವ ಅಭಿಯಾನದ ಅಡಿಯಲ್ಲಿ ತಿರಂಗಾ ಅಲಂಕರಿಸಲಾಗುತ್ತಿದೆ ಎಂದು ತಿಳಿಸಿದರು.
ಶ್ರೀನಗರದ ವಾಣಿಜ್ಯ ಕೇಂದ್ರವಾದ ಲಾಲ್ ಚೌಕ್ ಪ್ರದೇಶದಲ್ಲಿ ಹಲವಾರು ತಿಂಗಳುಗಳಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಅಥರ್ ಖಾನ್, ಯೋಜನೆ ಅಂತಿಮ ಹಂತಕ್ಕೆ ಬಂದಿದ್ದು, ಆಗಸ್ಟ್ 15 ರ ಮೊದಲು ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು.
ಏತನ್ಮಧ್ಯೆ, ಶ್ರೀನಗರ ಮತ್ತು ಕೇಂದ್ರಾಡಳಿತ ಪ್ರದೇಶದಾದ್ಯಂತ ಹಲವಾರು ಸ್ಥಳಗಳನ್ನು ಅಲಂಕರಿಸಲಾಗಿದೆ, ಜನರು ತಿರಂಗ ರ್ಯಾಲಿಗಳನ್ನು ನಡೆಸುವ ಮೂಲಕ ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಗುರುತಿಸಲು ಸಜ್ಜಾಗುತ್ತಿದ್ದಾರೆ ಎಂದು ಹೇಳಿದ್ದಾರೆ.