ಮಧ್ಯಪ್ರದೇಶದ ಅಶೋಕನಗರ ರೈಲ್ವೆ ನಿಲ್ದಾಣದಲ್ಲಿ 14 ವರ್ಷದ ಬಾಲಕಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಆಯತಪ್ಪಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಹತ್ತಿರದಲ್ಲಿದ್ದ ಪೊಲೀಸರು ಆಕೆಯನ್ನು ರಕ್ಷಿಸಿದ್ದಾರೆ.
ಈ ಘಟನೆ ರೈಲ್ವೆ ನಿಲ್ದಾಣದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಓಡುತ್ತಿರುವ ರೈಲಿಗೆ ಹತ್ತಲು ಓಡುವಾಗ ಆಯತಪ್ಪಿ ಬಿದ್ದಿದ್ದಾಳೆ. ಈ ವೇಳೆ ಹತ್ತಿರದಲ್ಲಿದ್ದ ಪೊಲೀಸ್ ಸಿಬ್ಬಂದಿ ಗೋವಿಂದ್ ಸಿಂಗ್ ಚೌಹಾಣ್ ಎಂಬುವರು ಕೂಡಲೇ ಆಕೆಯನ್ನು ರಕ್ಷಿಸಿದ್ದಾರೆ.
ಬಾಲಕಿ ರೈಲಿನ ಕೆಳಗೆ ಬೀಳುವುದನ್ನು ತಡೆದು ಆಕೆಯನ್ನು ರಕ್ಷಿಸಿದ್ದಾರೆ. ಇದರಿಂದ ಆಕೆಗೆ ಗಂಭೀರ ಗಾಯಗಳಾಗಿಲ್ಲ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಜನ ಶ್ಲಾಘಿಸಿದ್ದಾರೆ. ಅಲ್ಲದೆ, ಇಂತಹ ಸಾಹಸಗಳಿಗೆ ಕೈ ಹಾಕದಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಘಟನೆಯ ನಂತರ ರೈಲ್ವೆ ಅಧಿಕಾರಿಗಳು ಸುರಕ್ಷತಾ ಸಲಹೆಗಳನ್ನು ನೀಡಿದ್ದಾರೆ. ಪ್ರಯಾಣಿಕರು ರೈಲ್ವೆ ನಿಯಮಗಳನ್ನು ಪಾಲಿಸಬೇಕು. ರೈಲು ಚಲಿಸಲು ಪ್ರಾರಂಭಿಸಿದ ನಂತರ ಹತ್ತಲು ಪ್ರಯತ್ನಿಸಬಾರದು ಎಂದು ಸಲಹೆ ನೀಡಿದ್ದಾರೆ. ಇಂತಹ ಪ್ರಯತ್ನಗಳು ಗಂಭೀರ ಅಪಘಾತಗಳಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.
जीआरपी के आरक्षक गोविन्द सिंह चौहान ने 14 वर्षीय बालिका की जान बचाई,अशोकनगर रेलवे स्टेशन पर होने से बचा हादसा। ऐसी घटना से यह भी सबक लें कि चलती ट्रेन में चढ़ने का प्रयास न करें। pic.twitter.com/LNJA8wPvAS
— Nitendra Sharma (@nitendrasharma2) March 29, 2025