alex Certify ತನ್ನ ದೇಶದ ಮಹಿಳಾ ಆಟಗಾರರು ಶಾರ್ಟ್ಸ್ ಧರಿಸಿದ್ದಕ್ಕೆ ಪಾಕ್ ಪತ್ರಕರ್ತನ ತಕರಾರು; ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಂದ ಛೀಮಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತನ್ನ ದೇಶದ ಮಹಿಳಾ ಆಟಗಾರರು ಶಾರ್ಟ್ಸ್ ಧರಿಸಿದ್ದಕ್ಕೆ ಪಾಕ್ ಪತ್ರಕರ್ತನ ತಕರಾರು; ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಂದ ಛೀಮಾರಿ

ತನ್ನ ದೇಶದ ಮಹಿಳಾ ಫುಟ್ಬಾಲ್ ಆಟಗಾರರು ಶಾರ್ಟ್ಸ್ ಧರಿಸಿದ್ದಕ್ಕೆ ಪಾಕ್ ಪತ್ರಕರ್ತನೊಬ್ಬ ಪತ್ರಿಕಾಗೋಷ್ಠಿ ಸಂದರ್ಭದಲ್ಲಿಯೇ ತಕರಾರು ತೆಗೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ನೆಟ್ಟಿಗರು ಸದರಿ ಪತ್ರಕರ್ತನಿಗೆ ಛೀಮಾರಿ ಹಾಕುತ್ತಿದ್ದಾರೆ.

ಈ ಘಟನೆ ನೇಪಾಳದ ಕಠ್ಮಂಡುವಿನಲ್ಲಿ ನಡೆಯುತ್ತಿರುವ SAFE ಫುಟ್ಬಾಲ್ ಪಂದ್ಯಾವಳಿ ಸಂದರ್ಭದಲ್ಲಿ ನಡೆದಿದ್ದು, ಎಂಟು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪಾಕಿಸ್ತಾನ ಮಹಿಳಾ ತಂಡ ಮಾಲ್ಡೀವ್ಸ್ ವಿರುದ್ಧ ಏಳು ಗೋಲುಗಳ ಅಂತರದಿಂದ ಜಯ ಸಾಧಿಸಿತ್ತು.

ಪಂದ್ಯದ ಬಳಿಕ ಪತ್ರಿಕಾಗೋಷ್ಟಿ ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ಪಾಕ್ ಮೂಲದ ಪತ್ರಕರ್ತ ಇಸ್ಲಾಮಿಕ್ ರಾಷ್ಟ್ರವಾಗಿರುವ ಪಾಕಿಸ್ತಾನದಲ್ಲಿ ಆ ದೇಶದ ಆಟಗಾರ್ತಿಯರು ಲೆಗ್ಗಿಂಗ್ಸ್ ಧರಿಸುವ ಬದಲು ಶಾರ್ಟ್ಸ್ ಧರಿಸಿದ್ದೇಕೆ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಪತ್ರಿಕಾಗೋಷ್ಠಿಯಲ್ಲಿ ತಂಡದ ಮುಖ್ಯ ಕೋಚ್ ಸಮರ್ಪಕ ಉತ್ತರ ನೀಡಿದ್ದು, ಈ ವಿಡಿಯೋ ವೈರಲ್ ಆದ ಬಳಿಕ ನೆಟ್ಟಿಗರು, ಆಟಗಾರ್ತಿಯರ ಸಾಧನೆ ಬಗ್ಗೆ ಮಾತನಾಡುವುದನ್ನು ಬಿಟ್ಟು ಅವರ ಉಡುಪಿನ ಕುರಿತು ಪ್ರಶ್ನೆ ಕೇಳಿದ್ದಕ್ಕೆ ಪಾಕ್ ಪತ್ರಕರ್ತನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...