ಬೆಂಗಳೂರು: ಸಿಬ್ಬಂದಿಯಿಂದಲೇ ಬೆಂಗಳೂರು ಜಲಮಂಡಳಿ ವಾಟರ್ ಬಿಲ್ ಗೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ.
ಗ್ರಾಹಕರು ಪಾವತಿಸಿದ ಹಣವನ್ನು ಜಳಮಂಡಳಿಗೆ ನೀಡದೆ ವಂಚಿಸಲಾಗಿದೆ. ಹೀಗೆ ವಂಚನೆ ಮಾಡಿದ ಗ್ರೂಪ್ ಸಿ ಮತ್ತು ಡಿ ನೌಕರ ಸೇರಿದಂತೆ 7 ಜನರನ್ನು ಬಂಧಿಸಲಾಗಿದೆ. ರೆವೆನ್ಯೂ ಮ್ಯಾನೇಜರ್ ಆಗಿರುವ ಎಫ್.ಡಿ.ಎ. ನೌಕರ, ಗ್ರೂಪ್ ಡಿ ನೌಕರ. ಐವರು ಗುತ್ತಿಗೆದಾರರನ್ನು ಬೊಮ್ಮನಹಳ್ಳಿ ಠಾಣೆ ಪೋಲೀಸರು ಬಂಧಿಸಿದ್ದಾರೆ.
ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ವಂಚಿಸಿದ ಆರೋಪ ಕೇಳಿ ಬಂದಿತ್ತು. ಒಂದೂವರೆ ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ ವಂಚಿಸಿದ ಹಿನ್ನೆಲೆಯಲ್ಲಿ ಕೋಡಿಚಿಕ್ಕನಹಳ್ಳಿ ಉಪವಿಭಾಗದ ಎಇಇ ದೂರು ನೀಡಿದ್ದರು. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.