alex Certify ಮಳೆಹಾನಿ ಪರಿಶೀಲನೆ ಬಂದು ಹಳ್ಳದ ನೀರಲ್ಲಿ ಸಿಲುಕಿದ್ದ ಅಧಿಕಾರಿಗಳನ್ನು ಹರಸಾಹಸ ಮಾಡಿ ರಕ್ಷಿಸಿದ ಸ್ಥಳೀಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಹಾನಿ ಪರಿಶೀಲನೆ ಬಂದು ಹಳ್ಳದ ನೀರಲ್ಲಿ ಸಿಲುಕಿದ್ದ ಅಧಿಕಾರಿಗಳನ್ನು ಹರಸಾಹಸ ಮಾಡಿ ರಕ್ಷಿಸಿದ ಸ್ಥಳೀಯರು

ಚಾಮರಾಜನಗರ: ಮಳೆ ಹಾನಿ ಪರಿಶೀಲನೆಗೆ ಹೋಗಿ ಅಧಿಕಾರಿಗಳು ನೀರಿನಲ್ಲಿ ಸಿಲುಕಿದ್ದು, ಹಳ್ಳದ ನೀರಿನಲ್ಲಿ ಸಿಲುಕಿದ್ದ ಅಧಿಕಾರಿಗಳನ್ನು ಸ್ಥಳೀಯರು ರಕ್ಷಿಸಿದ ಘಟನೆ ಚಾಮರಾಜನಗರ ತಾಲೂಕಿನ ಕಣ್ಣೆಗಾಲ -ಆಲೂರು ನಡುವೆ ನಡೆದಿದೆ.

ಮಳೆ ಹಾನಿ ಪರಿಶೀಲನೆ ನಡೆಸಿ ಅಧಿಕಾರಿಗಳು ಕಾರ್ ನಲ್ಲಿ ವಾಪಸ್ ಆಗುತ್ತಿದ್ದರು. ಈ ವೇಳೆ ಹಳ್ಳದ ನೀರಿನಲ್ಲಿ ಸಿಲುಕಿದ್ದಾರೆ. ಹಳ್ಳ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನ ಮಟ್ಟ ಹೆಚ್ಚಳವಾಗಿ ಹಳ್ಳದ ನೀರಿನಲ್ಲಿ ಅಧಿಕಾರಿಗಳು ಸಿಲುಕಿದ್ದಾರೆ. ನೀರು ರಭಸವಾಗಿ ಹರಿಯುತ್ತಿದ್ದ ಕಾರಣ ಕಾರ್ ಮೇಲೆ ಹತ್ತಿ ನಿಂತುಕೊಂಡಿದ್ದಾರೆ.

ಸ್ಥಳೀಯರು ನೀರಿನಲ್ಲಿ ಮುಳುಗಿದ ಕಾರ್ ಗೆ ಹಗ್ಗ ಕಟ್ಟಿ ಎಳೆದು ಅಧಿಕಾರಿಗಳನ್ನು ರಕ್ಷಿಸಿದ್ದಾರೆ. ಎಇಇ ಕಾಂತರಾಜ್, ಎಇ ರಾಜು, ಚಾಲಕ ಮುರುಗೇಶ್ ಅವರನ್ನು ರಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...