alex Certify ಜೀವಕ್ಕೆ ಎರವಾದ ಕಲುಷಿತ ನೀರು: ವೃದ್ಧ ಸಾವು, 94 ಜನ ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೀವಕ್ಕೆ ಎರವಾದ ಕಲುಷಿತ ನೀರು: ವೃದ್ಧ ಸಾವು, 94 ಜನ ಅಸ್ವಸ್ಥ

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ವೃದ್ಧ ಸಾವನ್ನಪ್ಪಿದ್ದಾರೆ. ಮುದೇನೂರು ಗ್ರಾಮದ ನಿವಾಸಿ ಶಿವಪ್ಪ(70) ಮೃತಪಟ್ಟವರು ಎಂದು ಹೇಳಲಾಗಿದೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಮುದೇನೂರು ಗ್ರಾಮದ ಶಿವಪ್ಪ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದು, ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಾಲ್ವರ ಸ್ಥಿತಿ ಗಂಭೀರವಾದ ಹಿನ್ನೆಲೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಲುಷಿತ ನೀರು ಸೇವಿಸಿ ನಾಲ್ಕು ದಿನದಲ್ಲಿ ಒಟ್ಟು 94 ಜನ ಅಸ್ವಸ್ಥರಾಗಿದ್ದಾರೆ. ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆಯ ಪೈಪ್ ಒಡೆದು ಅವಘಡ ಉಂಟಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...