
ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 67 ವರ್ಷದ ಜಯರಾಮಪ್ಪ ಗುರುವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಗ್ರಾಮದಲ್ಲಿ ಕಲುಷಿತ ನೀರು ಕುಡಿದು ವಾಂತಿ ಭೇದಿಯಿಂದ 200ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೊದಲಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯರಾಮಪ್ಪ ಅವರ ಆರೋಗ್ಯದಲ್ಲಿ ಗಂಭೀರ ಸಮಸ್ಯೆ ಉಂಟಾದ ನಂತರ ಜೂನ್ 13 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.