ದಾವಣಗೆರೆ: ದಾವಣಗೆರೆ ಜಿಲ್ಲೆ ಮತ್ತಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂವತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮತ್ತಿ ಗ್ರಾಮದ ಕುಡಿಯುವ ನೀರಿನ ಸಂಪರ್ಕದ ಪೈಪ್ ಲೈನ್ ಒಡೆದು ಚರಂಡಿ ನೀರು ಸೇರಿಕೊಂಡ ಹಿನ್ನೆಲೆಯಲ್ಲಿ ನೀರು ಕಲುಷಿತಗೊಂಡಿದೆ. ಈ ನೀರನ್ನು ಕುಡಿದ ಗ್ರಾಮದ ಜನರಲ್ಲಿ ಆರೋಗ್ಯ ಸಮಸ್ಯೆ ಉಂಟಾಗಿದೆ. ಕಲುಷಿತ ನೀರು ಸೇವನೆಯಿಂದ ಹಲವರು ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ.
ಅಕ್ಟೋಬರ್ 7ರಂದು ಗ್ರಾಮದ ನಿವಾಸಿ ಟಿ. ಸೋಮಶೇಖರಪ್ಪ(66), ಅಕ್ಟೋಬರ್ 8ರಂದು ಶಾಂತಮ್ಮ(75) ಮೃತಪಟ್ಟಿದ್ದಾರೆ. ಗ್ರಾಮಸ್ಥರು ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲವೆಂಬ ಆರೋಪ ಕೇಳಿ ಬಂದಿದೆ.