
ಹೊಸಪೇಟೆ: ವಿಜಯನಗರ ಜಿಲ್ಲೆ, ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 14 ಮಂದಿ ಅಸ್ವಸ್ಥರಾಗಿದ್ದಾರೆ.
ನಿನ್ನೆಯಿಂದಲೇ ಕೆಲವರಿಗೆ ಆರೋಗ್ಯದಲ್ಲಿ ವ್ಯತ್ಯಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಪೇಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡವರೆಲ್ಲರ ಆರೋಗ್ಯ ಸ್ಥಿರವಾಗಿದೆ. ಕುಡಿಯುವ ನೀರಿನ ಟ್ಯಾಂಕರ್ ಸ್ವಚ್ಛಗೊಳಿಸದ ಹಿನ್ನೆಲೆಯಲ್ಲಿ ಅನಾಹುತ ಸಂಭವಿಸಿದ್ದು, ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿ ಶಂಕರ್ ನಾಯ್ಕ್, ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.