ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥರನ್ನು ಮೊಳಕಾಲ್ಮೂರು ಮತ್ತು ರಾಂಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಸ್ವಸ್ಥರ ಪೈಕಿ ಓಬಕ್ಕ ಮತ್ತು ಚಾಮುಂಡಮ್ಮ ಅವರ ಸ್ಥಿತಿ ಗಂಭೀರವಾಗಿದ್ದು, ಇಬ್ಬರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಕಾಮಗಾರಿ ವೇಳೆ ನೀರು ಪೂರೈಕೆಯ ಪೈಪ್ ಗೆ ಹಾನಿಯಾಗಿದೆ. ಹಾನಿಯಾಗಿದ್ದ ಪೈಪ್ ಮೂಲಕ ಚರಂಡಿ ನೀರು ಸೇರಿ ಕಲುಷಿತಗೊಂಡಿರುವ ಶಂಕೆ ವ್ಯಕ್ತವಾಗಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷವೇ ಘಟನೆಗೆ ಕಾರಣವೆಂದು ಹೇಳಲಾಗಿದೆ.
ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ. ಮಧುಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.