ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ.
ಸುನಿತಾ ಲಕ್ಷಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ(13), ಸುನೀತಾ ಲೋಕೇಶ ಲಮಾಣಿ(10) ಮೃತಪಟ್ಟವರು ಎಂದು ಹೇಳಲಾಗಿದೆ.
ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಒಬ್ಬ ಬಾಲಕಿ ಬಿದ್ದಿದ್ದು, ಈ ವೇಳೆ ರಕ್ಷಿಸಲು ಹೋಗಿ ಮತ್ತಿಬ್ಬರು ಬಾಲಕಿಯರು ನೀರುಪಾಲಾಗಿದ್ದಾರೆ. ಘಟನಾಸ್ಥಳಕ್ಕೆ ಮುಂಡರಗಿ ತಹಶೀಲ್ದಾರ್ ಆಶಪ್ಪ ಪೂಜಾರ ಭೇಟಿ ನೀಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.