alex Certify ಕೃಷಿ ಹೊಂಡಕ್ಕೆ ಬಿದ್ದು ಮೂವರು ಬಾಲಕಿಯರು ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿ ಹೊಂಡಕ್ಕೆ ಬಿದ್ದು ಮೂವರು ಬಾಲಕಿಯರು ನೀರು ಪಾಲು

ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ.

ಸುನಿತಾ ಲಕ್ಷಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ(13), ಸುನೀತಾ ಲೋಕೇಶ ಲಮಾಣಿ(10) ಮೃತಪಟ್ಟವರು ಎಂದು ಹೇಳಲಾಗಿದೆ.

ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಒಬ್ಬ ಬಾಲಕಿ ಬಿದ್ದಿದ್ದು, ಈ ವೇಳೆ ರಕ್ಷಿಸಲು ಹೋಗಿ ಮತ್ತಿಬ್ಬರು ಬಾಲಕಿಯರು ನೀರುಪಾಲಾಗಿದ್ದಾರೆ. ಘಟನಾಸ್ಥಳಕ್ಕೆ ಮುಂಡರಗಿ ತಹಶೀಲ್ದಾರ್ ಆಶಪ್ಪ ಪೂಜಾರ ಭೇಟಿ ನೀಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...