ಬೆಂಗಳೂರು: ಕೇಂದ್ರ ಸರ್ಕಾರದ ಜಲಜೀವನ ಮಿಷನ್ ಯೋಜನೆಯಡಿ ಇನ್ನೆರಡು ವರ್ಷದಲ್ಲಿ ಪ್ರತಿಮನೆಗೂ ನಲ್ಲಿ ನೀರು ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ. ಕೊಂಡಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, 2023 ರ ಅಂತ್ಯದ ವೇಳೆಗೆ ರಾಜ್ಯದ ಎಲ್ಲಾ ಗ್ರಾಮಗಳ ಪ್ರತಿ ಮನೆಗೆ ನಲ್ಲಿ ಅಳವಡಿಸಿ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ನೀರಿನ ಲಭ್ಯತೆಗೆ ಇರುವಲ್ಲಿ ಕೆಲಸ ಬೇಗ ಆಗುತ್ತಿದೆ. ಕೆಲವೆಡೆ ನೀರಿನ ಲಭ್ಯತೆ ಇಲ್ಲದ ಕಾರಣ ಯೋಜನೆ ಅನುಷ್ಠಾನ ಸವಾಲಿನ ಕೆಲಸವಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.