ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೆಣಸಿ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಒಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗನ ಕಳೇಬರ ಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಮಂಗನ ಕಾಯಿಲೆ ಪ್ರಕರಣಗಳಿಂದ ಮೊದಲೇ ನಲುಗಿ ಹೋಗಿರುವ ಗ್ರಾಮದಲ್ಲಿ ಈ ರೀತಿಯ ಬೆಳವಣಿಗೆ ನಡೆದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಅಧಿಕಾರಿಗಳು ನೀರಿನ ಟ್ಯಾಂಕ್ ಗಳಿಗೆ ಮುಚ್ಚಳ ಮುಚ್ಚಿಸಿದ್ದಾರೆ. ಹಲಗೆರೆ ಗ್ರಾಮ ಪಂಚಾಯಿತಿ ಸುತ್ತಮುತ್ತ ಪ್ರದೇಶದಲ್ಲಿ 87 ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿದ್ದು, 7 ಜನ ಸಾವನ್ನಪ್ಪಿದ್ದಾರೆ.