ಹರಿವೆ ಸೊಪ್ಪು ಸಾಮಾನ್ಯವಾಗಿ ಹಳ್ಳಿ ಕಡೆಗಳಲ್ಲಿ ಹೆಚ್ಚು ಬಳಸುತ್ತಾರೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಉತ್ಕರ್ಷಣಾ ನಿರೋಧಕ ಗುಣಗಳಿದ್ದು, ಇದರಿಂದ ಹಲವು ಆರೋಗ್ಯ ಪ್ರಯೋಜನ ಗಳನ್ನು ಹೊಂದಿದೆ.
*ಹರಿವೆ ಸೊಪ್ಪು ಸೇವಿಸುವುದರಿಂದ ಸುಲಭವಾಗಿ ಜೀರ್ಣವಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಗಮಗೊಳಿಸುತ್ತದೆ.
*ಇದು ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡಿ ಹೃದಯ ಸಂಬಂಧಿತ ಕಾಯಿಲೆಗಳನ್ನು ದೂರ ಮಾಡುತ್ತದೆ. ಹೃದಯವನ್ನು ಆರೋಗ್ಯವಾಗಿರಿಸುತ್ತದೆ.
*ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಸೋಂಕುಗಳ ವಿರುದ್ಧ ಹೋರಾಡುತ್ತದೆ. ಗಾಯಗಳನ್ನು ಬಹಳ ಬೇಗನೆ ವಾಸಿ ಮಾಡುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
*ಇದರಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದ್ದು, ಇದು ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಿ ಮೂಳೆಗಳ ಬೆಳೆವಣಿಗೆಗೆ ಸಹಕರಿಸುತ್ತದೆ. ಮತ್ತು ಮೂಳೆಗಳ ಸಮಸ್ಯೆ ಕಾಡದಂತೆ ತಡೆಯುತ್ತದೆ.