ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆ ಮತ ಎಣಿಕೆ ಚುರುಕುಗೊಂಡಿದ್ದು, ಆರಂಭದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನ.13ರಂದು ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಅಭ್ಯರ್ಥಿಯಾಗಿ ನವ್ಯಾ ಹರಿದಾಸ್ ಹಾಗೂ ಎಲ್ ಡಿ ಎಫ್ ಅಭ್ಯರ್ಥಿಯಾಗಿ ಸತ್ಯನ್ ಮೊಕೆರಿ ಸ್ಪರ್ಧಿಸಿದ್ದರು.
ಸದ್ಯದ ಮಾಹಿತಿ ಪ್ರಕಾರ ವಯನಾಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಗೆಲುವಿನತ್ತ ಮುನ್ನುಗ್ಗುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ 2,38, 935 ಮತಗಳನ್ನು ಪಡೆದಿದ್ದು, 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.