ನವದೆಹಲಿ: 48 ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಯ ಫಲಿತಾಂಶ ಇಂದು ನಿರ್ಧಾರವಾಗಲಿದೆ. ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ 5 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ ಸಾಧಿಸಿದ್ದು, ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಕಳೆದ ಕೆಲವು ವಾರಗಳಲ್ಲಿ ಅಸ್ಸಾಂ, ಬಿಹಾರ, ಛತ್ತೀಸ್ಗಢ, ಗುಜರಾತ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮೇಘಾಲಯ, ಪಂಜಾಬ್, ರಾಜಸ್ಥಾನ, ಸಿಕ್ಕಿಂ, ಉತ್ತರಾಖಂಡ್, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು.
ಕೇರಳದ ವಯನಾಡ್ ಮತ್ತು ಮಹಾರಾಷ್ಟ್ರದ ನಾಂದೇಡ್ ಲೋಕಸಭಾ ಕ್ಷೇತ್ರಗಳಿಗೂ ಚುನಾವಣೆ ನಡೆದಿತ್ತು.
ಈ ಚುನಾವಣೆಯಲ್ಲಿ ಕಾಂಗ್ರೆಸ್ ನ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಸಹೋದರ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿದ್ದ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ರಾಹುಲ್ ಗಾಂಧಿ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಸ್ಥಾನಗಳನ್ನು ಗೆದ್ದ ನಂತರ ವಯನಾಡ್ ನಲ್ಲಿ ಚುನಾವಣೆ ಅಗತ್ಯವಾಗಿತ್ತು.